ಮನೆ ಮನರಂಜನೆ ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ..’ ಚಿತ್ರದಲ್ಲಿ ನಟ ದಿಗಂತ್

‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ..’ ಚಿತ್ರದಲ್ಲಿ ನಟ ದಿಗಂತ್

0

‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ..’ ಚಿತ್ರತಂಡ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ.

Join Our Whatsapp Group

ಈ ಚಿತ್ರವನ್ನು ಪರಂವ ಪಿಕ್ಚರ್ಸ್‌ ವಿತರಣೆ ಮಾಡುತ್ತಿದೆ. ಗುಲ್‌ ಮೊಹರ್‌ ಫಿಲಂಸ್‌ ಮತ್ತು ವರುಣ್‌ ಸ್ಟುಡಿಯೋಸ್‌ ಈ ಚಿತ್ರವನ್ನು ನಿರ್ಮಿಸಿದೆ. ಇನ್ನು, ಈ ಚಿತ್ರದಲ್ಲಿ ನಟ ದಿಗಂತ್‌ ಕೂಡಾ ನಟಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ. ಆದರೆ, ಚಿತ್ರತಂಡ ಮಾತ್ರ ಒಪ್ಪಿಕೊಂಡಿಲ್ಲ.

ಯೂತ್‌ ಸಬ್ಜೆಕ್ಟ್ ಒಳಗೊಂಡ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿತಿನ್‌ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾಗಣದಲ್ಲಿರುವ ಈ ಚಿತ್ರದಲ್ಲಿ ಸ್ಯಾಂಡಲ್‌ ವುಡ್‌ ಸ್ಟಾರ್‌ ನಟರ ಗೆಸ್ಟ್‌ ಅಪಿಯರೆನ್ಸ್‌ ಕೂಡಾ ಮಾಡಿದ್ದಾರೆ.

ಕರ್ನಾಟಕದಾದ್ಯಂತ ಸುಮಾರು 6000 ನಟ ನಟಿಯರನ್ನು ಆಡಿಷನ್‌ ಮಾಡಿ, 30 ಕಲಾವಿದರನ್ನು ಆಯ್ಕೆ ಮಾಡಿ ಸಿನಿಮಾ ಮಾಡಲಾಗಿದೆ. ಚಿತ್ರಕ್ಕೆ ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.