ಮನೆ ರಾಜ್ಯ ಮೈಸೂರು: ಶಕ್ತಿ ಯೋಜನೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ

ಮೈಸೂರು: ಶಕ್ತಿ ಯೋಜನೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ

0

ಮೈಸೂರು: ರಾಜ್ಯ ಸರ್ಕಾರ ಜಾರಿ ಮಾಡಿರುವ ಶಕ್ತಿಯೋಜನೆ ವಿರೋಧಿಸಿ ನಗರದಲ್ಲಿಆಟೋ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

Join Our Whatsapp Group

ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಆಟೋ ಚಾಲಕರು ಧರಣಿ ಕೈಗೊಂಡಿದ್ದು, ಸುಮಾರು 25 ಆಟೋಗಳಲ್ಲಿ ಬೆಂಗಳೂರಿಗೆ ತೆರಳಿ ಸಿಎಂ ಸಿದ್ಧರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ.

ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಿ. ಆಟೋ ಚಾಲಕರ ಸಮಸ್ಯೆ ಕುರಿತು ಚರ್ಚಿಸಿ  ಪರಿಹಾರ ನೀಡಿ. ಇಲ್ಲವಾದರೇ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾನಿರತ ಆಟೋಚಾಲಕರು ಎಚ್ಚರಿಕೆ ನೀಡಿದ್ದಾರೆ.