ಮನೆ ಅಪರಾಧ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಶವವಾಗಿ ಪತ್ತೆ

ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಶವವಾಗಿ ಪತ್ತೆ

0

ಚಿತ್ರದುರ್ಗ: ಹೊಳಲ್ಕೆರೆ ಪೊಲೀಸ್ ಠಾಣೆ ಬಳಿಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಬಸವಂತ ಕುಮಾರ್(37) ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Join Our Whatsapp Group

ಮೃತ ಬಸವಂತಕುಮಾರ್ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ನಿವಾಸಿಯಾಗಿದ್ದು, ಜೂ.5ರಂದು ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಇತನ ಲಾರಿಯನ್ನ ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿ ಠಾಣೆಗೆ ತಂದಿದ್ದರು.

ಬಳಿಕ ದಂಡ ಕಟ್ಟಲು ಹಣವಿಲ್ಲದೆ ರಾತ್ರಿ ಲಾರಿಯಲ್ಲೇ ಮಲಗಿದ್ದ. ಇದಾದ ಮಾರನೇ ದಿನ ಬಸವಂತಕುಮಾರ್ ನಾಪತ್ತೆಯಾಗಿದ್ದ. ಈ ಬಗ್ಗೆ ಕುಟುಂಬಸ್ಥರು ಹೊಳಲ್ಕೆರೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.