ಮನೆ ರಾಜ್ಯ ಗೃಹಜ್ಯೋತಿ ಯೋಜನೆ: ಈ ತಿಂಗಳು ಉಚಿತ ವಿದ್ಯುತ್ ಬೇಕೆಂದರೆ ಜು.25ರೊಳಗೆ ಅರ್ಜಿ ಸಲ್ಲಿಸಿ: ಇಂಧನ ಸಚಿವ...

ಗೃಹಜ್ಯೋತಿ ಯೋಜನೆ: ಈ ತಿಂಗಳು ಉಚಿತ ವಿದ್ಯುತ್ ಬೇಕೆಂದರೆ ಜು.25ರೊಳಗೆ ಅರ್ಜಿ ಸಲ್ಲಿಸಿ: ಇಂಧನ ಸಚಿವ ಕೆ ಜೆ ಜಾರ್ಜ್

0

ಚಿಕ್ಕಮಗಳೂರು: ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಲು ಡೆಡ್ ಲೈನ್ ಇಲ್ಲ, ಆದರೆ ಈ ತಿಂಗಳು ಉಚಿತ ವಿದ್ಯುತ್ ಸಿಗಬೇಕೆಂದರೆ ಜುಲೈ 25ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

Join Our Whatsapp Group

ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 25ರೊಳಗೆ ಅರ್ಜಿ ಸಲ್ಲಿಸಿದರೆ ಆಗಸ್ಟ್ ತಿಂಗಳ ಬಿಲ್ ನಲ್ಲಿ ಶೂನ್ಯ ಬಿಲ್ ಎಂದು ಬರುತ್ತದೆ. ಇಲ್ಲದಿದ್ದರೆ ನಾಗರಿಕರು ಹಣ ಪಾವತಿ ಮಾಡಬೇಕಾಗುತ್ತದೆ ಎಂದರು.

200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು, ನಾಗರಿಕರು ಆದಷ್ಟು ಶೀಘ್ರ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದು ಹೇಳಿದರು.

ಗೃಹ ಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್ ಜಾರಿಯಾಗಲಿದೆ. ಗೃಹಜ್ಯೋತಿಗೆ ಅರ್ಜಿ ಹಾಕದವರಿಗೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೆಯದು.

ಅರ್ಜಿ ಹಾಕಲು ದಿನಾಂಕದ ಗಡುವು ಇಲ್ಲ. ಆದರೆ ಸರ್ಕಾರದಿಂದ ಉಚಿತ ಸಿಗಬೇಕೆಂದರೆ ನಾಗರಿಕರು ಅರ್ಜಿ ಹಾಕಲೇಬೇಕು. ಆದಷ್ಟು ಬೇಗನೆ ಅರ್ಜಿ ಹಾಕಿದರೆ ಜನರಿಗೇ ಲಾಭ, ಇಲ್ಲದಿದ್ದರೆ ವಿದ್ಯುತ್ ಶುಲ್ಕ ಕಟ್ಟಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.