ಮನೆ ರಾಜ್ಯ ಮೈಸೂರು ಸಂಸದರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ : ಕಾಮೆಂಟ್ ಮಾಡಿದ್ದ ಹೆಡ್ ಕಾನ್ಸ್ಟೇಬಲ್...

ಮೈಸೂರು ಸಂಸದರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ : ಕಾಮೆಂಟ್ ಮಾಡಿದ್ದ ಹೆಡ್ ಕಾನ್ಸ್ಟೇಬಲ್ ಅಮಾನತು

0

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಪೊಲೀಸ್ ಕಾನ್ಸ್ಟೇಬಲ್ವೊಬ್ಬರನ್ನು ಅಮಾನತು ಮಾಡಲಾಗಿದೆ.

Join Our Whatsapp Group

ವಿ.ವಿ. ಪುರಂ ಟ್ರಾಫಿಕ್ ಪೊಲೀಸ್ ಠಾಣೆ ಹೆಡ್ಕಾನ್ಸ್ಟೇಬಲ್ ಬಿ. ಪ್ರಕಾಶ್ ಅಮಾನತುಗೊಂಡಿದ್ದಾರೆ. ಇವರ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದರು.


ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.


ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಸಂಸದರು ದೂರು ನೀಡಿದ್ದರು. ಪ್ರಕಾಶ್ ಎಂಬವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದಿಸುವ ಮೂಲಕ ಅವಹೇಳನಕಾರಿಯಾಗಿ ಪೋಸ್ಟ್ಗಳನ್ನು ಮಾಡುತ್ತಿರುವ ಇವನನ್ನು ಕಾನೂನು ಪ್ರಕಾರ ವಿಚಾರಣೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿದ್ದರು.


ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಸಂಸದರ ದೂರನ್ನು ಪರಿಗಣಿಸಿ, ಇಲಾಖೆ ವಿಚಾರಣೆ ಬಾಕಿ ಇರಿಸಿ ಪ್ರಕಾಶ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.