ಮನೆ ರಾಜಕೀಯ ಸಿಎಂ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಸಿಎಂ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್: ಹೆಚ್.ಡಿ.ಕುಮಾರಸ್ವಾಮಿ ಆರೋಪ

0

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಾಸಕರ ಶಿಫಾರಸ್ಸು ತಂದರೇ ಸಾಲದು 30 ಲಕ್ಷ ದುಡ್ಡು ತನ್ನಿ ಎಂದು ಹೇಳುತ್ತಿದ್ದಾರೆ ದುಡ್ಡು ಕೊಟ್ಟಿರುವವರು ಸಾಕ್ಷಿ ಕೊಡುತ್ತರಾ? ದುಡ್ಡು ಕೊಟ್ಟವರಿಗೆ ಕೆಲಸ ಆಗಬೇಕು ಹಾಗಾಗಿ ಯಾರು ಕೊಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

Join Our Whatsapp Group

ಇಂದು 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಬ್ಬ ಶಾಸಕನಾಗಿ ಸರ್ಕಾರದ ಲೋಪದೋಷ ಬಗ್ಗೆ ಚರ್ಚಿಸ್ತೇನೆ. ವಿಪಕ್ಷ ನಾಯಕನಾಗಿ ಈ ಸರ್ಕಾರವನ್ನು ಟೀಕಿಸುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಏನು ಭರವಸೆ ಕೊಟ್ರಿ? ಆ ಭರವಸೆಗಳನ್ನು ಯಾವ ರೀತಿ ಈಡೇರಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದರು.

ಈ ಸರ್ಕಾರ ಐಸಿಯುಗೆ ಹೋಗುವ ಕಾಲ ಬರುತ್ತೆ ಎಂದು ಅನಿಸುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದು ಹೇಳಿದರು.