ಬೆಂಗಳೂರು: ನಟ ಕೋಮಲ್ ಕುಮಾರ್ “ನಮೋ ಭೂತಾತ್ಮ 2” ಚಿತ್ರ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.
ನಮೋ ಭೂತಾತ್ಮ 2 ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನೃತ್ಯ ನಿರ್ದೇಶಕ ಮುರಳಿ ನಿರ್ದೇಶನ ಹಾಗೂ ಕೋಮಲ್ ಅಭಿನಯದ ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಬಿಡುಗಡೆ ಮಾಡುವ ಮೂಲಕ ಕೋಮಲ್ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ.
ಟೀಸರ್ ಬಿಡುಗಡೆಗೊಳಿಸಿ ಮಾತನಾಡಿದ ಧ್ರುವ ಸರ್ಜಾ, “ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲ ಚಿತ್ರಗಳನ್ನೂ ನೋಡಿದ್ದೇನೆ. ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ ಮಾಸ್ಟರ್ ಅವರು ನನ್ನ ಚಿತ್ರಗಳ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. “ನಮೋ ಭೂತಾತ್ಮ 2″ ಸೂಪರ್ ಹಿಟ್ ಆಗಲಿ” ಎಂದು ಹರಸಿದರು.
ಕೋಮಲ್ ಮಾತನಾಡಿ, “ನಾನು ನಿರ್ಮಿಸಿ ನಟಿಸಿದ್ದ ಮುರಳಿ ಮಾಸ್ಟರ್ ನಿರ್ದೇಶಿಸಿದ್ದ “ನಮೋ ಭೂತಾತ್ಮ” ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ “ನಮೋ ಭೂತಾತ್ಮ 2″ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ. ಮೊದಲ ಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾರಿಗೆ ಧನ್ಯವಾದ” ಎಂದರು.
ಯುವ ನಟಿ ಲೇಖಾ ಚಂದ್ರ ಅಭಿನಯಿಸಿದ್ದಾರೆ. ಜಿ.ಜಿ. ಮೋನಿಕಾ, ವರುಣ್ ರಾಜ್ ಸೇರಿದಂತೆ ಸಾಕಷ್ಟು ಕಲಾವಿದರಿದ್ದಾರೆ. ನಿರ್ಮಾಪಕ ಸಂತೋಷ್ ನಿರ್ಮಾಣ ಮಾಡಿದ್ದಾರೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.