ಮನೆ ಅಪರಾಧ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ನಾಲೆಗೆ ಎಸೆದ ಆರೋಪಿಯ ಬಂಧನ

ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ನಾಲೆಗೆ ಎಸೆದ ಆರೋಪಿಯ ಬಂಧನ

0

ಗುಹಾವಾಟಿ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ನಂತರ ಶವವನ್ನು ನದಿಗೆ ಎಸೆದಿರುವ ಘಟನೆ ಗುಹಾವಾಟಿಯಲ್ಲಿರುವ ಕಮ್ರುಪ್ (ಮೆಟ್ರೋ) ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಯನ್ನು ಅಸ್ಸಾಂ ಪೋಲೀಸರು ಬಂಧಿಸಿದ್ದಾರೆ.

Join Our Whatsapp Group

8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ಕಳೆದ ಸೋಮವಾರ ತನ್ನ ಫೋನ್ ಗೆ ರಿಚಾರ್ಜ್ ಮಾಡಿಸಲು ತೆರಳಿದ್ದು, ವಾಪಸ್ ಬಂದಿಲ್ಲ. ಆಕೆಯ ಶವ ಶುಕ್ರವಾರ ಸೋನಾಪುರದ ದಿಗರು ನದಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ವಿರುದ್ಧ ಸ್ಥಳೀಯರು ಸೋನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು ಶಿಘ್ರ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೀಗ ಆರೋಪಿ ಆಟೋ ರಿಕ್ಷಾ ನಿರ್ವಾಹಕನನ್ನು ಪೊಲೀಸರು ಬಂದಿಸಿದ್ದಾರೆ .ಈ ಅಪರಾದವನ್ನು ಒಪ್ಪಿಕೊಂಡಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.