ಮನೆ ರಾಜ್ಯ ಬಿಜೆಪಿಯಲ್ಲಿ ವಿಪಕ್ಷನ ನಾಯಕನಾಗುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ನಾಚಿಕೆಗೇಡು: ಕಾಂಗ್ರೆಸ್ ವ್ಯಂಗ್ಯ

ಬಿಜೆಪಿಯಲ್ಲಿ ವಿಪಕ್ಷನ ನಾಯಕನಾಗುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ನಾಚಿಕೆಗೇಡು: ಕಾಂಗ್ರೆಸ್ ವ್ಯಂಗ್ಯ

0

ಬೆಂಗಳೂರು: ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು ಎಂದು  ಬಿಜೆಪಿ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ.

Join Our Whatsapp Group

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ ಎಂದು ಕಿಡಿಕಾರಿದೆ.

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ’ಯೂ ಇಲ್ಲ. ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ. ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಫಿಕ್ಸ್ ಮಾಡಲಾಗಿತ್ತು. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಎಂಬುದನ್ನು ಬಿಜೆಪಿ ಉತ್ತರಿಸಬೇಕು ಎಂದು ಪ್ರಶ್ನಿಸಿದೆ.