ಮನೆ ಅಪರಾಧ ಚಲಿಸುತ್ತಿದ್ದ ಬೈಕ್’ಗೆ  ಖಾಸಗಿ ಬಸ್ ಡಿಕ್ಕಿ: ವಿದ್ಯಾರ್ಥಿನಿ ಸಾವು

ಚಲಿಸುತ್ತಿದ್ದ ಬೈಕ್’ಗೆ  ಖಾಸಗಿ ಬಸ್ ಡಿಕ್ಕಿ: ವಿದ್ಯಾರ್ಥಿನಿ ಸಾವು

0

ಬೆಂಗಳೂರು: ತಂದೆ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಯಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರು  ನಗರದ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. 

Join Our Whatsapp Group

ದಿಶಾ(18)ಮೃತಪಟ್ಟ ವಿದ್ಯಾರ್ಥಿನಿ.

ಘಟನೆಯಲ್ಲಿ ತಂದೆ ಸತೀಶ್ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮೃತ  ದಿಶಾ  ಎಂ ಇ ಎಸ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೈಕ್ ನಲ್ಲಿ ತಂದೆ ಜೊತೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.