ಮನೆ ರಾಷ್ಟ್ರೀಯ ವಾಕಿಂಗ್ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ: ಮಗು ಸೇರಿದಂತೆ ಮೂವರ ಸಾವು

ವಾಕಿಂಗ್ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ: ಮಗು ಸೇರಿದಂತೆ ಮೂವರ ಸಾವು

0

ಹೈದರಾಬಾದ್: ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಸನ್‌ ಸಿಟಿ ಬಂಡ್ಲಗುಡದ ಸಮೀಪ ಇಂದು ಬೆಳಗಿನ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Join Our Whatsapp Group

ಈ ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಲಿಯಾದವರಲ್ಲಿ ತಾಯಿ ಮತ್ತು ಮಗು, ಬೆಳಗಿನ ವಾಕಿಂಗ್‌ ಗೆ ಹೊರಟಿದ್ದಾಗ ಬಂಡ್ಲಗುಡ ರಸ್ತೆಯಲ್ಲಿ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ತಾಯಿ ಮತ್ತು ಮಗು ಹಾಗೂ ಮತ್ತೊಬ್ಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಕಾರು ಚಾಲಕ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಮೂವರ ಮೃತದೇಹಗಳನ್ನು ಉಸ್ಮಾನಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಕಾರು ಅತಿವೇಗದಲ್ಲಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.