ಮನೆ ರಾಜ್ಯ ಪಕ್ಷ ಸೂಚಿಸಿದರೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ

ಪಕ್ಷ ಸೂಚಿಸಿದರೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ

0

ಮೈಸೂರು: ಪಕ್ಷ ಸೂಚಿಸಿದರೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು  ಮಾಜಿ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.

Join Our Whatsapp Group

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ದ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಚುನಾವಣೆಗೆ ಇನ್ನು 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ ಎಂದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ ಆದ್ದರಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದರೇ ಪಾಲನೆ ಮಾಡಬೇಕಾಗುತ್ತದೆ ಎಂದರು.