ಮನೆ ಸುದ್ದಿ ಜಾಲ ಸಂಚಾರಿ ನಿಯಮ ಉಲ್ಲಂಘನೆ ದಂಡ ಕಟ್ಟಲು ಮತ್ತೆ ಶೇ.50 ರಷ್ಟು ರಿಯಾಯಿತಿ

ಸಂಚಾರಿ ನಿಯಮ ಉಲ್ಲಂಘನೆ ದಂಡ ಕಟ್ಟಲು ಮತ್ತೆ ಶೇ.50 ರಷ್ಟು ರಿಯಾಯಿತಿ

0

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಮತ್ತೆ ಶೇ 50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ.

Join Our Whatsapp Group

ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು.

ಇದೀಗ ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.