ಮನೆ ರಾಜ್ಯ ಸಾಗರ: ಭಾರಿ ಮಳೆಗೆ ಶಾಲಾ ಕಾಂಪೌಂಡ್ ಕುಸಿತ

ಸಾಗರ: ಭಾರಿ ಮಳೆಗೆ ಶಾಲಾ ಕಾಂಪೌಂಡ್ ಕುಸಿತ

0

ಸಾಗರ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು, ಯಾವುದೇ ಅನಾಹುತವಾಗಿಲ್ಲ.

Join Our Whatsapp Group

ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ, ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಗುರುವಾರ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.