ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಆನ್ ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು. ಹಾಗೆಯೇ ಆಫ್ ಲೈನ್ನಲ್ಲೂ ಅರ್ಜಿ ಕಳುಹಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ ( NHAI )
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್ (ಮೀಡಿಯಾ ರಿಲೇಷನ್)
ಶೈಕ್ಷಣಿಕ ಅರ್ಹತೆ:
NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ/ಸಾರ್ವಜನಿಕ ಸಂಬಂಧಗಳಲ್ಲಿ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳನ್ನು ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.78800 ರಿಂದ ರೂ. 209200/- ರವರೆಗೆ ಮಾಸಿಕ ವೇತನ ಸಿಗಲಿದೆ.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-08-2023
ಅರ್ಜಿ ಕಳುಹಿಸಬೇಕಾದ ವಿಳಾಸ:
GM (HR & Admn)-III, National Highways Authority of India, Plot No.G5-&6, Sector-10, Dwarka, New Delhi-110075
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.