ಮನೆ ಅಪರಾಧ ದಾಖಲೆಗಳಿಗೆ ಸಹಿ ಮಾಡಲು ಲಂಚ ಪಡೆಯುತ್ತಿದ್ದ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ

ದಾಖಲೆಗಳಿಗೆ ಸಹಿ ಮಾಡಲು ಲಂಚ ಪಡೆಯುತ್ತಿದ್ದ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ

0

ಮಂಗಳೂರು: ನಿವೃತ್ತಿಯಾಗುತ್ತಿರುವ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಮಂಗಳೂರು ಹೊರವಲಯದ ಬಜ್ಪೆಯ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ.

ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ ಬಳಿಕ, ಮುಖ್ಯ ಶಿಕ್ಷಕಿಯಾಗಿ 42 ವರ್ಷ ಸೇವೆ ಸಲ್ಲಿಸಿದ್ದ ಶೋಭಾರಾಣಿ ಅವರ ನಿವೃತ್ತಿ ಪಿಂಚಣಿ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಲು ಲಂಚಕ್ಕೆ ಸತಾಯಿಸಿದ್ದ ಜ್ಯೋತಿ ಪೂಜಾರಿ ಮೊದಲು 20 ಲಕ್ಷ ಬೇಡಿಕೆ ಇಟ್ಟಿದ್ದು, ಬಳಿಕ ಐದು ಲಕ್ಷ ನೀಡಲು ಹೇಳಿದ್ದಳು. ಶುಕ್ರವಾರ ಹಣ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಅಧಿಕಾರಿಗಳು ಜ್ಯೋತಿಯನ್ನು ಹಣದ ಸಹಿತ ಬಂಧಿಸಿದ್ದಾರೆ.

ಲೋಕಾಯಯಕ್ತ ಎಸ್ಪಿ ಸೈಮನ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್‌ ಹಾಗೂ ಕಲಾವತಿ, ಇನ್‌ ಸ್ಪೆಕ್ಟರ್‌ ವಿನಾಯಕ ಬಿಲ್ಲವ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು ಎಂದು ಲೋಕಾಯುಕ್ತ ಪ್ರಕಟನೆ ತಿಳಿಸಿದೆ.