ಲೀಡ್ಸ್ ನಲ್ಲಿ ನಡೆಯುತ್ತಿರುವ ಆತಿಥೇಯ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ 3ನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿಯುವ ಮೂಲಕ ಸ್ಟೀವ್ ಸ್ಮಿತ್ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್ ನಲ್ಲಿ ಸ್ಟೀವ್ ಸ್ಮಿತ್ ಒಟ್ಟು 5 ಕ್ಯಾಚ್ ಗಳನ್ನು ಹಿಡಿದಿದ್ದರು. ಇದರೊಂದಿಗೆ ಆ್ಯಶಸ್ ಸರಣಿಯಲ್ಲಿ ಅತ್ಯಧಿಕ ಕ್ಯಾಚ್ ಗಳನ್ನು ಹಿಡಿದ ವಿಶೇಷ ದಾಖಲೆಯೊಂದು ಸ್ಮಿತ್ ಹೆಸರಿಗೆ ಸೇರ್ಪಡೆಯಾಯಿತು.
ಈ ಪಟ್ಟಿಯಲ್ಲಿ 62 ಇನಿಂಗ್ಸ್ಗಳಲ್ಲಿ 54 ಕ್ಯಾಚ್ ಗಳನ್ನು ಹಿಡಿದ ಆಸ್ಟ್ರೇಲಿಯಾದ ಮಾಜಿ ಆಟಗಾರ ಇಯಾನ್ ಬಾಥಂ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 65 ಇನಿಂಗ್ಸ್ ಗಳ ಮೂಲಕ ಸ್ಟೀವ್ ಸ್ಮಿತ್ ಕೂಡ 54 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಬಾಥಂ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇನ್ನು ಟೆಸ್ಟ್ ಇನಿಂಗ್ಸ್ ವೊಂದರಲ್ಲಿ ಅತ್ಯಧಿಕ ಬಾರಿ 4 ಕ್ಕಿಂತ ಹೆಚ್ಚಿನ ಕ್ಯಾಚ್ ಗಳನ್ನು ಹಿಡಿದ ವಿಶೇಷ ದಾಖಲೆ ಒಂದು ಸ್ಟೀವ್ ಸ್ಮಿತ್ ಪಾಲಾಗಿದೆ. ಸ್ಮಿತ್ ಇದುವರೆಗೆ 4 ಬಾರಿ ಇನಿಂಗ್ಸ್ ವೊಂದರಲ್ಲಿ 4 ಕ್ಕಿಂತ ಹೆಚ್ಚಿನ ಕ್ಯಾಚ್ಗಳನ್ನು ಹಿಡಿದಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಮೊದಲ ಆಸ್ಟ್ರೇಲಿಯನ್ ಫೀಲ್ಡರ್ ಎಂಬ ಹೆಗ್ಗಳಿಕೆಗೂ ಸ್ಮಿತ್ ಪಾತ್ರರಾಗಿರುವುದು ವಿಶೇಷ.
ರೋಚಕ ಪೈಪೋಟಿಯತ್ತ ಮೂರನೇ ಟೆಸ್ಟ್:
ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ (118) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ ಮಾರ್ಕ್ ವುಡ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ 263 ರನ್ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಮಾರ್ಕ್ ವುಡ್ 5 ವಿಕೆಟ್ ಕಬಳಿಸಿ ಮಿಂಚಿದರು.
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಪ್ಯಾಟ್ ಕಮಿನ್ಸ್ ಎಸೆತಗಳು ಮಾರಕವಾಗಿ ಪರಿಣಮಿಸಿತು. ಆದರೆ ಕೆಲ ಕ್ರಮಾಂಕದಲ್ಲಿ 80 ರನ್ ಬಾರಿಸುವ ಮೂಲಕ ಬೆನ್ ಸ್ಟೋಕ್ಸ್ ತಂಡಕ್ಕೆ ಆಸರೆಯಾದರು. ಆದರೆ ಕಮಿನ್ಸ್ ಕರಾರುವಾಕ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಮೊದಲ ಇನಿಂಗ್ಸ್ ಅನ್ನು 237 ರನ್ಗಳಿಗೆ ಅಂತ್ಯಗೊಳಿಸಿತು. ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ 6 ವಿಕೆಟ್ ಉರುಳಿಸಿದರು.
ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 47 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 116 ರನ್ ಕಲೆಹಾಕಿದೆ. ಕ್ರೀಸ್ ನಲ್ಲಿ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.