ಬಿಟ್ಲಾ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲಾದ ಮೇಗಿನಪೇಟೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಮೇಗಿನ ಪೇಟೆ ನಿವಾಸಿ ಗುರುವಪ್ಪನವರ ಪುತ್ರ, ವಿಟ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (30)ಎಂದು ಗುರುತಿಸಲಾಗಿದೆ.
ಪ್ರಶಾಂತ್ ರವರು ಶುಕ್ರವಾರದಂದು ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಿಳಿಯರು ಬಂದು ನೋಡಿದಾಗ ಮನೆ ಒಳಗೆ ಪ್ರಶಾಂತ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಮೃತ ದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಜರು ನಡೆಸಲಾಗಿದೆ. ಮೃತರು ವಿವಾಹಿತರಾಗಿದ್ದು ಕೆಲ ಸಮಯಗಳ ಹಿಂದೆ ಪತ್ನಿ ಅವರನ್ನು ತೊರೆದಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಆತ್ಮಹತ್ಯೆಗೆ ಕೌಟುಂಬಿಕ ಮನಸ್ತಾಪವೇ ಕಾರಣ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.