ಮನೆ ರಾಜ್ಯ ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ನಿಧನ

ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ನಿಧನ

0

ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಪುತ್ರಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು ಎನ್ನಲಾಗಿದೆ.

Join Our Whatsapp Group

ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ.ಸಿ.ಎಂ.ನಿಂಬಣ್ಣವರ್ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.