ಹುಬ್ಬಳ್ಳಿ: ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ಹಳೇಹುಬ್ಬಳ್ಳಿ ಆನಂದನಗರದ ಬ್ಯಾಹಟ್ಟಿ ಪ್ಲಾಟ್ ನಲ್ಲಿ ನಡೆದಿದೆ.
ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಬರ್ಬರವಾಗಿ ಹತ್ಯೆ ಮಾಡಿದ ಭೀಮಪ್ಪನು ಭೀತಿಗೊಂಡು ತಾನೇ ಪೊಲೀಸರಿಗೆ ಶರಣಾಗಿದ್ದಾನೆ. ಈ ದುರ್ಘಟನೆಗೆ ದಂಪತಿ ಮಧ್ಯೆಯಿದ್ದ ಕೌಟುಂಬಿಕ ಕಲಹವೆ ಕಾರಣವೆಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಎಸಿಪಿ ಆರ್.ಕೆ. ಪಾಟೀಲ, ಹಳೇಹುಬ್ಬಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಸುರೇಶ ಯಳ್ಳೂರ ಹಾಗೂ ಪಿಎಸ್ ಐ ಬನ್ನಿಕೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














