ಮನೆ ರಾಜ್ಯ ಅಕ್ಕಿ ಬದಲಿಗೆ ನೀಡುವ ಹಣ ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಸಿ:  ಸಿಎಂ ಸಿದ್ಧರಾಮಯ್ಯ

ಅಕ್ಕಿ ಬದಲಿಗೆ ನೀಡುವ ಹಣ ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಸಿ:  ಸಿಎಂ ಸಿದ್ಧರಾಮಯ್ಯ

0

ಬೆಂಗಳೂರು: ಅಕ್ಕಿ ಬದಲಿಗೆ ನೀಡುವ ಹಣ ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಸಿಬೇಕು ಎಂದು ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

Join Our Whatsapp Group

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ, ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ.

ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಟ್ವಿಟ್ಟರ್ ನಲ್ಲಿ ಸಿಎಂ ಸಿದ‍್ಧರಾಮಯ್ಯ ಹೇಳಿದ್ದಾರೆ.

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು

ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರವನ್ನು ಕೈಗೊಂಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.          

ಅನ್ನ ಭಾಗ್ಯ ಯೋಜನೆಯು 10 ವರ್ಷ ಪೂರೈಸಿದ ಹಿನ್ನೆಲೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ರಾಜ್ಯದ ಯಾರೊಬ್ಬರು ಹಸಿವಿನಿಂದ ಮಲಗಬಾರದು ಎಂದು ಸದಾಶಯದೊಂದಿಗೆ ಬಡ ಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರ ಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ.  ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆ ಅನಿಸುತ್ತದೆ ಎಂದು ಹೇಳಿದ್ದಾರೆ.           

ನಾಡಿನ ಜನತೆಗೆ ವಿಶ್ವಾಸವಿರಿಸಿ ನೀಡಿದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದಿದ್ದಾರೆ. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್  ಮತ್ತಿತರ ಉಪಕ್ರಮಗಳ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ. 2013ರಿಂದ ಅನ್ನಭಾಗ್ಯವು 4 ಕೋಟಿಗೂ ಹೆಚ್ಚು ಜನರಿಗೆ ಆಹಾರ ಭದ್ರತೆಯನ್ನು ಖಾತ್ರಿಪಡಿಸುತ್ತಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.