ಚಿತ್ರದುರ್ಗ: ತಾಲೂಕಿನ ಕಸವನಹಳ್ಳಿಯಲ್ಲಿ ಕಳಪೆ ಕಾಮಗಾರಿ ಮಾಡಿದ್ದಾರೆ ಎಂಬ ಆರೋಪ ಹಿನ್ನಲೆ, ಪಿಡಬ್ಲ್ಯೂಡಿ ಇಂಜಿನಿಯರ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.
ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಸನವನಹಳ್ಳಿ ಬಳಿ 1ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆ ರಸ್ತೆ ಕಾಮಗಾರಿ ವೀಕ್ಷಣೆಗೆ ಇಂಜಿನಿಯರ್ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಳಪೆ ಕಾಮಗಾರಿ ಮಾಡಲಾಗುತ್ತಿದೆಯೆಂದು ಆರೋಪಿಸಿ ಅವರ ಜೊತೆ ವಾಗ್ವಾದ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಸವನಹಳ್ಳಿಯ ಕರಿಯಪ್ಪ ಹಾಗೂ ಮತ್ತಿತರರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.