ಬೆಂಗಳೂರು: ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಸೇರಿದಂತೆ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರಾಗಿದ್ದ ಸತ್ಯಭಾಮಾ ಸಿ ಅವರನ್ನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೂಬಾಲನ್ ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಜಯಪುರ ಜಿಲ್ಲೆಯ ಉಪ ಆಯುಕ್ತರಾಗಿ ನಿಯೋಜಿಸಲಾಗಿದೆ. ಅಲ್ಲದೇ ಇದೇ ಜಿಲ್ಲಾ ಪಂಚಾಯತ್ ನ ವಿಜಯಮಹಾಂತೇಶ ಬಿ. ದಾನಮ್ಮನವರ್ ಅವರನ್ನು ಸಹ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ದರ್ಶನ್ ಎಚ್.ವಿ. ಅವರನ್ನು ಐಟಿ ಮತ್ತು ಬಿಟಿ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಡಾ. ಅನುರಾಧಾ ಕೆ.ಎನ್. ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನೂ ಅಲ್ಲಿನ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವರ್ನಿತ್ ನೇಗಿ ಅವರನ್ನು ಕೊಡಗು ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.