ಮನೆ ರಾಷ್ಟ್ರೀಯ ಹಿಮಾಚಲ ಪ್ರದೇಶ: ಮುಂದಿನ 24 ಗಂಟೆ ರೆಡ್, ಆರೆಂಜ್ ಅಲರ್ಟ್ ಘೋಷಣೆ

ಹಿಮಾಚಲ ಪ್ರದೇಶ: ಮುಂದಿನ 24 ಗಂಟೆ ರೆಡ್, ಆರೆಂಜ್ ಅಲರ್ಟ್ ಘೋಷಣೆ

0

ಶಿಮ್ಲಾ(ಹಿಮಾಚಲ ಪ್ರದೇಶ): ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಭಾರತೀಯ ಹವಾಮಾನ ಇಲಾಖೆ ಪರ್ವತ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.

Join Our Whatsapp Group

ಹಿಮಾಚಲ ಪ್ರದೇಶದ ಸೋಲನ್, ಶಿಮ್ಲಾ, ಸಿರ್ಮೌರ್, ಕುಲ್ಲು, ಮಂಡಿ, ಕಿನ್ನೌರ್, ಲಹೌಲ್ ಮೊದಲಾದ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉನಾ, ಹಮಿರ್ಪುರ್, ಕಾಂಗ್ರ, ಚಂಬ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಡಿ, ಕಿನ್ನೌರ್, ಲಹೌಲ್, ಸ್ಪಿಟಿ ಜಿಲ್ಲೆಗಳಲ್ಲಿ ಪ್ರವಾಹ ವಿಕೋಪದ ಮುನ್ನೆಚ್ಚರಿಕೆ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಸಂದೀಪ್ ಕುಮಾರ್ ಶರ್ಮ ತಿಳಿಸಿದ್ದಾರೆ.

ಭಾರೀ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಕಂಡ ಕಂಡಲ್ಲಿ ಭೂಕುಸಿತವಾಗಿದೆ. ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ಇಲ್ಲಿಯವರೆಗೆ 13 ಕಡೆ ಭಾರೀ ಭೂಕುಸಿತ ಉಂಟಾಗಿದೆ. 22 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗಿದೆ.