ಮನೆ ರಾಷ್ಟ್ರೀಯ ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಫೋಟ

ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಫೋಟ

0

ಪಶ್ಚಿಮ ಬಂಗಾಳ:  ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿರುವ ಡೈಮಂಡ್ ಹಾರ್ಬರ್ ಪಟ್ಟಣದಲ್ಲಿ ಪಂಚಾಯತ್ ಚುನಾವಣಾ ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ.

Join Our Whatsapp Group

ಬಾಂಬಸ್ ಸ್ಫೋಟದಿಂದ ಭಯಗೊಂಡ ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಹಿಂಸಾಚಾರ ನಡೆದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಮತ ಎಣಿಕೆ ಕೇಂದ್ರದ ಹೊರಗೆ ದೇಶಬಾಂಬ್‌ ಎಸೆಯಲಾಗಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

8ರಂದು ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ನಡೆದಿತ್ತು, 22 ಜಿಲ್ಲೆಗಳ 73,887 ಸ್ಥಾನಗಳಿಗೆ ಪಂಚಾಯತ್ ಸಮಿತಿಗಳು ಮತ್ತು ಗ್ರಾಮ ಪಂಚಾಯಿತಿಗಳ ಸದಸ್ಯರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಸುಮಾರು 2 ಲಕ್ಷ ಮಂದಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಸ್ತುತ ಸ್ಥಳೀಯ ಚುನಾವಣೆಗಳು ಎಲ್ಲ ಪಕ್ಷಗಳಿಗೂ ನಿರ್ಣಾಯಕವೆನಿಸಿದೆ.

ಕೇಂದ್ರ ಪಡೆ ಭದ್ರತೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ನಿಯಂತ್ರಣ ಕೊಠಡಿಗಳಲ್ಲಿ ಮತ ಎಣಿಕೆ ಮೇಲೆ ನಿಗಾ ಇಡಲಾಗಿದೆ.