ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ದೆಹಲಿ ಪೊಲೀಸರು ಇಂದು ಪತ್ತೆ ಮಾಡಿದ್ದಾರೆ.
ಗೀತಾ ಕಾಲೋನಿಯ ಫ್ಲೈಓವರ್ ಬಳಿ ಗಿಡಗಂಟಿಗಳ ಪ್ರದೇಶದಲ್ಲಿ ಮಹಿಳೆಯೊಬ್ಬರ ದೇಹದ ಭಾಗಗಳು ಪತ್ತೆಯಾಗಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಮೃತ ಮಹಿಳೆ ಯಾರು ಎಲ್ಲಿಯವರು ಎಂಬ ವಿಚಾರ ಪೊಲೀಸರ ತನಿಖೆ ಬಳಿಕ ಗೊತ್ತಾಗಬೇಕಿದೆ.














