ಮನೆ ಅಪರಾಧ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ ಗಾಯ

ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ ಗಾಯ

0

ಮಂಡ್ಯ: ಲಾರಿಯನ್ನು ಓವರ್ ಟೆಕ್ ಮಾಡಲು ಯತ್ನಿಸಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ತುಬಿನಕೆರೆ ಬಳಿ ಸಂಭವಿಸಿದೆ.

Join Our Whatsapp Group

ತುಬಿನಕೆರೆಯ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬುಧವಾರ ಸಂಭವಿಸಿದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಅತ್ತೆ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ  ದಾಖಲು ಮಾಡಲಾಗಿದೆ.      

ಮೈಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ ಪರಿಣಾಮ ಮುಂದಿದ್ದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಈ ಅಪಘಾತ  ಸಂಭವಿಸಿದೆ. ಘಟನೆ ಸಂಭಂದ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.                     

ಇದೇ ರೀತಿ ಮತ್ತೊಂದು ಅಪಘಾತ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದ ಬಳಿ ನಡೆದಿದ್ದು, ಲಾರಿಯೋದನ್ನು ಓವರ್ ಟೆಕ್ ಮಾಡಲು ಹೋದ ಕಾರು ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಸಂಭವಿಸಿಲ್ಲ. ಘಟನೆ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.