ಮನೆ ರಾಜ್ಯ ಕಳಪೆ ಮೊಟ್ಟೆ ಪೂರೈಕೆ ಮಾಡಿರುವವರನ್ನು ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ: ಲಕ್ಷ್ಮೀ ಹೆಬ್ಬಾಳ್ಕರ್

ಕಳಪೆ ಮೊಟ್ಟೆ ಪೂರೈಕೆ ಮಾಡಿರುವವರನ್ನು ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ: ಲಕ್ಷ್ಮೀ ಹೆಬ್ಬಾಳ್ಕರ್

0

ಬೆಂಗಳೂರು: ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. 

Join Our Whatsapp Group

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು,  ಪೂರೈಕೆದಾರರನ್ನು ಸಪ್ಲೈ ಲಿಸ್ಟ್  ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ. ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿ ಆಗುತ್ತಿದೆ.‌ ಯಾವುದೇ ನಿಯಂತ್ರಣ ಇಲ್ಲದೆ ಖರೀದಿ ನಡೆಯುತ್ತಿದೆ ಎಂಬುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ಆದರೆ ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ.‌ ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಇಲಾಖೆಯ ಉದ್ದೇಶ ಈಡೇರಿಸಲು ಬದ್ಧವಾಗಿದ್ದೇವೆ ಎಂದು ಹೇಳಿದರು‌.