ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಹಿನ್ನಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ.
ದೇವಾಲಯದ ಒಳಭಾಗದಲ್ಲಿ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರು ಬೆಳಗ್ಗೆಯಿಂದಲೇ ತಾಯಿಯ ದರ್ಶನ ಪಡೆಯುತ್ತಿದ್ದು, ರಾತ್ರಿಯವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಭಕ್ತರು ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ ಹಾಗೂ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗರ್ಭಗುಡಿಯ ಒಳಗಿರುವ ಮೂಲ ಚಾಮುಂಡೇಶ್ವರಿ ಮೂರ್ತಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಉತ್ಸವ ಮೂರ್ತಿಗೆ ನಾಗಲಕ್ಷ್ಮೀ ಅಲಂಕಾರ ಮಾಡಿರುವುದು ಆಕರ್ಷಣೀಯವಾಗಿದೆ.
ಚಾಮುಂಡಿ ಬೆಟ್ಟದಲ್ಲಿ ಕೊನೆಯ ಹಾಗೂ ನಾಲ್ಕನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ಬೆಳಗ್ಗೆ 3:30 ರಿಂದಲೇ ಚಾಮುಂಡಿ ತಾಯಿಯ ಮೂಲ ಮೂರ್ತಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಿಸಲಾಗಿದೆ.
ನಾಲ್ಕನೇ ಆಷಾಢ ಶುಕ್ರವಾರದ ನಿಮಿತ್ತ, ಹೆಚ್ಚಿನ ಭಕ್ತರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ.
ಬೆಳಗ್ಗೆ 5:30 ರಿಂದ ರಾತ್ರಿ 9:30ರವರೆಗೆ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ಇನ್ನು ಭಕ್ತರು ತಮ್ಮ ಖಾಸಗಿ ವಾಹನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವುದನ್ನು ನಿಷೇಧ ಹೇರಲಾಗಿದೆ. ಬೆಟ್ಟದ ಪಾದದ ಬಳಿ ಲಲಿತ್ ಮಹಲ್ ಮೈದಾನದಿಂದ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆಯಿಂದ ರಾತ್ರಿ 8:30 ರವರೆಗೆ ಉಚಿತ ಬಸ್ ವ್ಯವಸ್ಥೆ ಇರಲಿದೆ. ಭಕ್ತರು ತಮ್ಮ ಖಾಸಗಿ ವಾಹನಗಳನ್ನು ಲಲಿತ್ ಮಹಲ್ ಮೈದಾನದ ಪಕ್ಕದಲ್ಲಿ ಪಾರ್ಕಿಂಗ್ ಮಾಡಿ, ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿ ದರ್ಶನ ಪಡೆಯಬಹುದು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.