ಮನೆ ಅಪರಾಧ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು ಲಂಚ ಪಡೆಯುತ್ತಿದ್ದ ಆಹಾರ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು ಲಂಚ ಪಡೆಯುತ್ತಿದ್ದ ಆಹಾರ ನಿರೀಕ್ಷಕ ಲೋಕಾಯುಕ್ತ ಬಲೆಗೆ

0

ಬೆಂಗಳೂರು: ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಹಣ 43 ಸಾವಿರ ನಗದನ್ನು ಪಡೆದುಕೊಳ್ಳುತ್ತಿದ್ದ ನಗರದ ತಹಶೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Join Our Whatsapp Group

ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ ಕಡಬಾಳು ಎನ್ನುವವರು, ರಂಗದಾಮಯ್ಯ ಎಂಬುವರ ಬಳಿ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಮುಂಗಡ ಹಣ 43ಸಾವಿರ ನಗದನ್ನ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಆರೋಪಿ ಫುಡ್ ಇನ್ಸ್ಪೆಕ್ಟರ್​ ಕಾರು ಹತ್ತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸುಮಾರು 15 ಕಿ.ಮೀ ವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಲೋಕಾಯುಕ್ತ ಅಧಿಕಾರಿಗಳು ಸುತ್ತುವರೆದಿದ್ದಾರೆ. ಆದಾಗ್ಯೂ ಅಧಿಕಾರಿಗಳ ಮೇಲೆ ವಾಹನವನ್ನು ಚಲಾಯಿಸಲು ಪ್ರಯತ್ನಿಸಿದ್ದರು. ಕೊನೆಗೆ ಮತ್ತೊಂದು ಕಾರನ್ನು ಬಳಸಿ ಅವರನ್ನು ಹಿಡಿದಿದ್ದಾರೆ.

ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು, ಜೊತೆಗೆ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನಲೆ, ಹಲ್ಲೆ ಮತ್ತು ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆದ ಆರೋಪದ ಮೇಲೆ ಅಧಿಕಾರಿಯ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.