ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಾದ್ಯಂತ ಕೊಲೆಗಳ ಸಂಖ್ಯೆ ಹೆಚ್ಚಾಗಿದೆ. ಎರಡೇ ತಿಂಗಳಿಗೆ ಸರ್ಕಾರ ನೈತಿಕತೆ ಕಳೆದುಕೊಂಡಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿಗಂಬರ ಸ್ವಾಮಿ ಕೊಲೆ, ಬೆಂಗಳೂರಲ್ಲಿ ಹಾಡಹಗಲೇ ಟೆಕ್ಕಿ ಸಾಯ್ತಾರೆ. ಉಳ್ಳಾಲದಲ್ಲಿ ನಮ್ಮ ಕಾರ್ಯಕರ್ತನ ಶವ ನೀರಲ್ಲಿ ಸಿಗುತ್ತೆ. ಹನುಮಜಯಂತಿ ಯಶಸ್ವಿಯಾಗಿದ್ದಕ್ಕೆ ವೇಣುಗೋಪಾಲ್ ಕೊಲೆಯಾಗಿದೆ.. A4 ಅಪರಾಧಿಯನ್ನು A1 ಮಾಡ್ತಾರೆ, A1 ಅಪರಾಧಿಯನ್ನ ರಕ್ಷಣೆ ಮಾಡ್ತಾರೆ. ಇಂದು ಇಂದಿನ ಕಾಂಗ್ರೆಸ್ ಸರ್ಕಾರದ ನೀತಿ ರಾಜಕೀಯ ಎಂದು ಹರಿಹಾಯ್ದಿದ್ದಾರೆ.
ಗ್ಯಾರಂಟಿ ಎಲ್ಲೋದ್ವು, ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿ ಎಂದಿದ್ರಿ. ನಿಮ್ಮ ಮೊದಲ ಕ್ಯಾಬಿನೇಟ್ ಯಾವಾಗ, ಮೊದಲು ಅದನ್ನ ಹೇಳಿ ಎಂದ ಅವರು 136 ಸೀಟ್ ಗೆದ್ದಿದ್ದೇವೆಂದು ದರ್ಪದಿಂದಿದ್ದಾರೆ, ಮುಂದೆ ಜನ ಪಾಠ ಕಲಿಸ್ತಾರೆ ಎಂದಿದ್ದಾರೆ.
ಸಿದ್ದು, ಡಿಕೆಶಿ ವಿರುದ್ಧ ಟಾರ್ಗೆಟ್, ಮಹಿಳಾ ರಾಜ್ಯಾಧ್ಯಕ್ಷೆ ಮತ್ತು ವಿಪಕ್ಷ ನಾಯಕರ ಪ್ರಶ್ನೆಗೆ ಉತ್ತರಿಸಲು ಶೋಭಾ ಕರಂದ್ಲಾಜೆ ನಿರಾಕರಿಸಿದರು.