ಮನೆ ರಾಜ್ಯ 7.27 ಲಕ್ಷ ರು ತನಕ ಆದಾಯ ತೆರಿಗೆ ಪಾವತಿ ಅಗತ್ಯವಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ...

7.27 ಲಕ್ಷ ರು ತನಕ ಆದಾಯ ತೆರಿಗೆ ಪಾವತಿ ಅಗತ್ಯವಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

0

ಮಣಿಪಾಲ : ಹೊಸ ಆದಾಯ ತೆರಿಗೆ ಪದ್ಧತಿಯ ಅಡಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್‌ ಗೆ ಅವಕಾಶ ಕಲ್ಪಿಸಲಾಗಿದೆ. 7.27 ಲಕ್ಷದವರೆಗೂ ಆದಾಯ ತೆರಿಗೆ ಪಾವತಿಸುವ ಅಗತ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Join Our Whatsapp Group

ಮಣಿಪಾಲದಲ್ಲಿ ನಡೆದ ಬಿಜೆಪಿ ಪ್ರಬುದ್ಧರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡವರಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ ಸೌಲಭ್ಯ ಇಲ್ಲ ಎಂಬ ಆಕ್ಷೇಪ ಇತ್ತು.ಆದರೆ ಈಗ ಆ ಸೌಲಭ್ಯವನ್ನು ಒದಗಿಸಲಾಗಿದೆ’ ಎಂದರು.

‘2013-14ರಲ್ಲಿ ಯುಪಿಎ ಸರ್ಕಾರ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕಾ ವಲಯಕ್ಕೆ (ಎಂಎಸ್‌ ಎಂಇ) ಬಜೆಟ್‌ನಲ್ಲಿ ನೀಡಿದ್ದು ಕೇವಲ 73,285 ಕೋಟಿ. ಆದರೆ, ಬಿಜೆಪಿ ಸರ್ಕಾರ 2023-24ನೇ ಸಾಲಿನಲ್ಲಿ 122,138 ಕೋಟಿ ಮೀಸಲಿಟ್ಟಿದೆ’ ಎಂದು ನಿರ್ಮಲಾ ಹೇಳಿದರು.

2023ರ ಕೇಂದ್ರ ಬಜೆಟ್‌ನಲ್ಲಿ ಎಂಎಸ್ ಎಂಇಗೆ ಕ್ರೆಡಿಟ್ ಗ್ಯಾರಂಟಿ ಯೋಜನೆಯಡಿ 39,000 ಕೋಟಿ ಒದಗಿಸಲಾಗಿದೆ. ಪರಿಣಾಮ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಮೇಲಿನ ಸಾಲದ ಹೊರೆ ಕಡಿಮೆಯಾಗಿದೆ. ಎಂಎಸ್‌ ಎಂಇ ವಲಯ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೋವಿಡ್ ಕಾಲಘಟ್ಟದಲ್ಲಿ ಬಸವಳಿದಿದ್ದ ಕ್ಷೇತ್ರಕ್ಕೆ ಪುನಶ್ಚೇತನ ನೀಡಲಾಗುತ್ತಿದೆ ಎಂದರು.