ನಟಿ ರಚನಾ ಇಂದರ್ “4 ಎನ್ 6′ ಎಂಬ ಸಿನಿಮಾದಲ್ಲಿ ನಟಿಸಿದ್ದು, ಸದ್ದಿಲ್ಲದೇ ಚಿತ್ರೀಕರಣ ಪೂರೈಸಿದೆ ಚಿತ್ರತಂಡ. ಮರ್ಡರ್ ಮಿಸ್ಟರಿ ಜೊತೆಗೆ ಥ್ರಿಲ್ಲರ್ ಕಥಾಹಂದರದ ಈ ಚಿತ್ರವನ್ನು ಸಾಯಿಪ್ರೀತಿ ಅವರು ನಿರ್ಮಾಣ ಮಾಡುತ್ತಿದ್ದಾರೆ.
ನವೀನ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಅವರು ನಿರ್ದೇಶನವಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ಇದಾಗಿದ್ದು, ನಟಿ ರಚನಾ ಇಂದರ್ ಅವರು ಮೊದಲ ಬಾರಿಗೆ ಫಾರೆನ್ಸಿಕ್ ಡಿಟೆಕ್ಟಿವ್ ಪಾತ್ರದಲ್ಲಿ ನಟಿಸಿದ್ದಾರೆ.
ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬಿಝಿಯಾಗಿರುವ ಚಿತ್ರತಂಡ ಮುಂದಿನ ತಿಂಗಳು ಚಿತ್ರದ ಟೀಸರ್ ರಿಲೀಸ್ ಮಾಡಲಿದೆ. ಚರಣ್ ತೇಜ್ ಅವರ ಛಾಯಾಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ಚಿತ್ರಕ್ಕಿದೆ. ಭವಾನಿ ಪ್ರಕಾಶ್, ಮೇಘನಾ, ಸಂಜಯ್ ನಾಯಕ್, ಸೌರವ್, ಸತ್ಯ ಹಾಗೂ ರೇಣುಕಾ ಹಾಗೂ ಇತರರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.














