ಮನೆ ಕ್ರೀಡೆ ಅಮೋಘ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

ಅಮೋಘ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

0

ಡೊಮಿನಿಕಾದ ವಿಂಡ್ಸರ್ ಪಾರ್ಕ್ ​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ.

Join Our Whatsapp Group

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್ ​ನಲ್ಲಿ ಕೇವಲ 150 ರನ್ ​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಯಶಸ್ವಿ ಜೈಸ್ವಾಲ್ (171) ಹಾಗೂ ರೋಹಿತ್ ಶರ್ಮಾರ (103) ಶತಕದೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ ನಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್​ ಗಳಿಸಿ ಡಿಕ್ಲೇರ್​ ಘೋಷಿಸಿತು.

ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಬ್ಯಾಟರ್ ​​ಗಳು ಅಶ್ವಿನ್ ಅವರ ಸ್ಪಿನ್ ಮೋಡಿ ಮುಂದೆ ಮಂಡಿಯೂರಿದ್ದಾರೆ. ಕೇವಲ 71 ರನ್ ನೀಡಿ 7 ವಿಕೆಟ್ ಕಬಳಿಸಿ ಅಶ್ವಿನ್, ವೆಸ್ಟ್ ಇಂಡೀಸ್​ ತಂಡವನ್ನು 130 ರನ್ ​ಗಳಿಗೆ ಆಲೌಟ್ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 141 ರನ್​ಗಳ ಅಮೋಘ ಗೆಲುವು ತನ್ನದಾಗಿಸಿಕೊಂಡಿತು.

ಈ ಗೆಲುವಿನೊಂದಿಗೆ ಐದು ತಂಡಗಳ ವಿರುದ್ಧ 22 ಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿತು.

ಭಾರತ ತಂಡವು ಆಸ್ಟ್ರೇಲಿಯಾ (32), ಇಂಗ್ಲೆಂಡ್ (31), ವೆಸ್ಟ್ ಇಂಡೀಸ್ (23), ನ್ಯೂಝಿಲೆಂಡ್ (22) ಹಾಗೂ ಶ್ರೀಲಂಕಾ (22) ಇಪ್ಪತ್ತಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದೆ.