ಮನೆ ರಾಜ್ಯ ಭಾನುವಾರ ಸ್ಪೀಕರ್ ಯು.ಟಿ ಖಾದರ್’ ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ

ಭಾನುವಾರ ಸ್ಪೀಕರ್ ಯು.ಟಿ ಖಾದರ್’ ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ

0

 ಮಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಅವರು ನೀಡಿರುವ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Join Our Whatsapp Group

ಭಾನುವಾರ ಡೆಲ್ಲಿಯ ಇಂಡಿಯಾ ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದು, ಓಡಿಸಾ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ವಿ. ಗೋಪಾಲಗೌಡ ಮತ್ತು ಭಾರತೀಯ ಬುದ್ದಿ ಜೀವಿಗಳ ಸಮ್ಮೇಳನದ ರಾಷ್ಟ್ರೀಯ ಅಧ್ಯಕ್ಷರು ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಭಾಗವಹಿಸಲಿದ್ದಾರೆ . ಹಾಗೂ ಛತ್ತಿಸ್ಗಢ ರಾಜ್ಯಪಾಲ  ಬಿಸ್ವ ಭೂಷಣ ಹರಿಚರಣ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರ ಆತ್ಮ ಚರಿತ್ರೆಯ ಇಂಗ್ಲಿಷ್ ಅನುವಾದ ‘ಬ್ಯಾಟಲ್ ನಾಟ್ ಓವರ್’ ಸಹ ಇದೇ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.