ಮನೆ ರಾಜ್ಯ ಪ್ರತಿಪಕ್ಷಗಳು ಒಟ್ಟಾದರೂ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಸಾಧ್ಯವಿಲ್ಲ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಪಕ್ಷಗಳು ಒಟ್ಟಾದರೂ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಸಾಧ್ಯವಿಲ್ಲ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0

 ಹುಬ್ಬಳ್ಳಿ: ಪ್ರತಿ ಪಕ್ಷಗಳು ಒಟ್ಟಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪ್ರಯತ್ನಿಸಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Join Our Whatsapp Group

 ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರತಿಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ, ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ, ಆಯಾ ರಾಜ್ಯಗಳಲ್ಲಿ ಪ್ರತಿ ಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ, ಪ್ರತಿಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ದಿಷ್ಟವಾದ ಕಾರ್ಯಕ್ರಮವಿಲ್ಲ, ಮೋದಿಯವರನ್ನು ಸೋಲಿಸಬೇಕೆಂದು ಒಗ್ಗಟ್ಟಾಗಿದ್ದಾರೆ, ಅದು ಆಗುವುದಿಲ್ಲ ಎಂದರು.

 ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು, ಅದು ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ನಡುವೆ ಇರುವ ಮಾತುಕತೆ ಈಗಾಗಲೇ ಕುಮಾರಸ್ವಾಮಿ ಅವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶ್ರುತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದರು.

 ವಿಶ್ವಪಕ್ಷ ನಾಯಕನ ಸ್ಥಾನ ಜುಲೈ 18ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ಊಹ ಪೋಹಾ ಎಂದು ಬೊಮ್ಮಾಯಿ ಹೇಳಿದರು.

 ಗೃಹಲಕ್ಷ್ಮಿ ಈಗಾಗಲೇ ಎಡವಟ್ಟಾಗಿದೆ. ದಿನಾಂಕ ಮೇಲೆ ದಿನಾಂಕ ಮುಂದೂಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ದಿಷ್ಟವಾದ ನಿಯಮಗಳನ್ನು ಮಾಡುತ್ತಿಲ್ಲ. ದೊಡ್ಡ ಭಾರ ಆಗುತ್ತಿರುವ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಕಡಿಮೆ ಅವಧಿಯಲ್ಲಿ ಕೆಲವರಿಗೆ ಮಾತ್ರ ಕೊಡಬೇಕು ಎನ್ನುವ ಉದ್ದೇಶ ಸರ್ಕಾರಕ್ಕೆ ಇದೆ. ತಾಯಂದಿರಿಗೆ, ರಾಜ್ಯದ ಹೆಣ್ಣು ಮಕ್ಕಳಿಗೆ  ಭ್ರಮನಿರಸನ ಮಾಡುವಂತಹ ಉದ್ದೇಶ ಈ ಯೋಜನೆಗಿದೆ ಎಂದು ಬೊಮ್ಮಾಯಿ ಹೇಳಿದರು.