ಮೈಸೂರು: ಕೌಟುಂಬಿಕ ಕಲಹಕ್ಕೆ ಒಂದು ದಿನದ ಹಸುಗೂಸು ಬಲಿಯಾದ ಘಟನೆ ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಕಣಿಯಹುಂಡಿ ಗ್ರಾಮದಲ್ಲಿ ನಡೆದಿದೆ.
ಪತಿ ಜೊತೆ ಜಗಳವಾಡಿದ ಗರ್ಭಿಣಿ ಆತ್ಮಹತ್ಯೆಗಾಗಿ ಮಾತ್ರೆ ಸೇವಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗದಿತ ಅವಧಿಗೂ ಮುನ್ನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದಾದ ಒಂದು ದಿನಕ್ಕೆ ಹಸುಗೂಸು ಸಾವನ್ನಪ್ಪಿದೆ.
ಕಣಿಯನಹುಂಡಿ ಗ್ರಾಮದ ಸಿದ್ದರಾಜು ಮತ್ತು ಅರ್ಪಿತಾ ದಂಪತಿ ಎರಡು ಮೂರು ತಿಂಗಳಲ್ಲಿ ತಂದೆ-ತಾಯಿಯಾಗಲಿದ್ದರು. ವೈದ್ಯರು ಸೆಪ್ಟೆಂಬರ್ ಗೆ ಹೆರಿಗೆ ದಿನಾಂಕ ನಿಗದಿ ಮಾಡಿದ್ದರು. ಈ ಮಧ್ಯೆ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಇದರಿಂದ ಮನನೊಂದ ಅರ್ಪಿತಾ ಆತ್ಮಹತ್ಯೆ ಮಾಡಿಕೊಳ್ಳಲು ಯಾವುದೋ ಮಾತ್ರೆಗಳನ್ನು ಸೇವಿಸಿದ್ದಾರೆ.
ಮಾತ್ರೆಗಳನ್ನು ಸೇವಿಸಿದ ಕೂಡಲೇ ಎಚ್ಚೆತ್ತ ಕುಟುಂಬಸ್ಥರು ಆಕೆಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿದ್ದಾರೆ. ಆಸ್ಪತ್ರೆಯಲ್ಲಿ ನಿಗದಿತ ಅವಧಿಗೂ ಮುನ್ನವೇ ಅರ್ಪಿತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಜನ್ಮ ನೀಡಿದ ಒಂದೇ ದಿನಕ್ಕೆ ಮಗು ಸಾವನ್ನಪ್ಪಿದೆ. ಆತ್ಮಹತ್ಯೆಗೆ ಯತ್ನಿಸಿದ ಅರ್ಪಿತಾಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.