ಮನೆ ರಾಷ್ಟ್ರೀಯ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ನಿಧನ

0

ಕೇರಳ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(79) ಜು.18ರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

Join Our Whatsapp Group

ಉಮ್ಮನ್‌ ಚಾಂಡಿ ನಿಧನದ ಬಗ್ಗೆ ಅವರ ಪುತ್ರ ಫೇಸ್‌ ಬುಕ್‌ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ.

ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಉಮ್ಮನ್‌ ಚಾಂಡಿ ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು.