ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು̧ ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.
ಪ್ರತಿ ಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ಬಲ್ಡೋಜ್ ನೀತಿ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪೀಠದಲ್ಲಿ ದಲಿತರು ಕುಳಿತು ಕೊಂಡಿದ್ದಾರೆ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿ ಇದು ಕ್ಷುಲ್ಲಕ, ಕೀಳು ಮಟ್ಟದ ಅಭಿರುಚಿ. ದಲಿತರ ಅನುಕುಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಎಂದರು.
ಕಳೆದ ಎರಡು ದಿನಗಳ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಹಾ ಘಟಬಂಧನ್ ಸಭೆಗೆ ಬಂದಿದ್ದ ಹೊರ ರಾಜ್ಯಗಳ ರಾಜಕಾರಣಿಗಳಿಗೆ ಶಿಷ್ಟಾಚಾರ ಬದಿಗೊತ್ತಿ, ರಾಜ್ಯದ ಘನತೆಯನ್ನು ಹತ್ತಿಕ್ಕಿ ಐ ಎ ಎಸ್ ಚಾಕರಿಗೆ ನಿಯೋಜಿಸಿದ್ದು ಸರಿಯಲ್ಲ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಿಕೆ ಮಾಡಿಕೊಂಡಿದೆ. ಐ ಎ ಎ ಸ್ ಅಧಿಕಾರಿಗಳನ್ನು ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಸದನದಲ್ಲಿ ಇವತ್ತು ಈ ವಿಚಾರವಾಗಿ ಜೆ ಡಿ ಎಸ್, ಬಿಜೆಪಿ ಶಾಸಕರು ಸೇರಿ ಚರ್ಚೆ ನಡೆಸಲು ಮುಂದಾದೆವು. ಪ್ರತಿಷ್ಠೆಯಿಂದ ನಾವು ಮಾಡಿದ್ದೆ ಅನ್ನೋ ಸರಿ ಅಂತ ಕಾಂಗ್ರೆಸ್ ನವರು ನಡೆದುಕೊಂಡಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿ ಇದ್ದಾಗ ಯಾವುದೇ ರೀತಿಯ ಗಣ್ಯರಿಗೆ ಸೇವೆ ಮಾಡಲು ಐ ಎ ಎಸ್ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. 2018ರಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಅವರನ್ನು ಕಳಿಸಿ ಗಣ್ಯರನ್ನ ಬರ ಮಾಡಿಕೊಂಡಿಲ್ಲ ಎಂದು ಅವರು ತಿಳಿಸಿದರು.
ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟ ಚಾರ ಉಲ್ಲಂಘನೆ ಮಾಡಿಲ್ಲ. ಅಧಿಕಾರಿಗಳನ್ನು ಗುಲಾಮರಾನ್ನಾಗಿ ಮಾಡಿಕೊಂಡು ಅಧಿಕಾರಿಗಳನ್ನು ಯಾರ ಮನೆ ಬಾಗಿಲುಗೂ ಕಳುಹಿಸಿಲ್ಲ. ಈ ಸರ್ಕಾರ ಸುಳ್ಳು ಹೇಳಿದೆ. ವಿರೋಧ ಪಕ್ಷಗಳ ಬಲ್ಡೋಜ್ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ ಎಂದು ಅವರು ಘೋಷಣೆ ಮಾಡಿದರು.
ಕೆಲವು ಮಂತ್ರಿಗಳು ಶಾಸಕರನ್ನು ಹೆದರಿಸುವ ಕೆಲಸ ಮಾಡಿದ್ದಾರೆ. ನಿಮ್ಮನ್ನು ಮುಗಿಸುವುದಾಗಿ ಸದನದಲ್ಲಿ ಬೆದರಿಕೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.