ಮನೆ ಸ್ಥಳೀಯ ಇನೋವಾ ಕಾರು – ದ್ವಿಚಕ್ರ ವಾಹನದ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಇನೋವಾ ಕಾರು – ದ್ವಿಚಕ್ರ ವಾಹನದ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ

0

ಹನೂರು: ಇನೋವಾ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.

Join Our Whatsapp Group

ಮೈಸೂರು ಜಿಲ್ಲೆ ಕ್ಯಾತನಹಳ್ಳಿ ಗ್ರಾಮದ ಅಭಿ ಹಾಗೂ ವಿನಯ್ ಗಾಯಗೊಂಡವರಾಗಿದ್ದಾರೆ.

ಕ್ಯಾತನಹಳ್ಳಿ ಗ್ರಾಮದಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಸ್ವ ಗ್ರಾಮಕ್ಕೆ ವಾಪಸ್ ತೆರಳುತ್ತಿದ್ದ ವೇಳೆ  ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಇನೋವಾ ಕಾರು ಎಲ್ಲೇ ಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಯ್ಯನ ದೊಡ್ಡಿ ಗ್ರಾಮದ ಸಮೀಪ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಪರಿಣಾಮ ದ್ವಿಚಕ್ರ ವಾಹನ ಸವಾರರಿಗೆ ತೀವ್ರ ಗಾಯವಾಗಿದೆ. ಹಿಂಬದಿಯಲ್ಲಿ ಕುಳಿತಿದ್ದ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡಿದ್ದ ಇಬ್ಬರನ್ನು ಸ್ನೇಹಿತರು ದ್ವಿಚಕ್ರ ವಾಹನದಲ್ಲಿಯೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.