ಮನೆ ರಾಷ್ಟ್ರೀಯ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: ಓರ್ವನ ಬಂಧನ, ವಿಡಿಯೋ ಹಂಚಿಕೊಳ್ಳದಂತೆ ಸಾಮಾಜಿಕ ಜಾಲತಾಣಗಳಿಗೆ ಸೂಚನೆ

ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: ಓರ್ವನ ಬಂಧನ, ವಿಡಿಯೋ ಹಂಚಿಕೊಳ್ಳದಂತೆ ಸಾಮಾಜಿಕ ಜಾಲತಾಣಗಳಿಗೆ ಸೂಚನೆ

0

ಕಾಂಗ್‌ಪೊಕ್ಪಿ(ಮಣಿಪುರ): ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಹಿಂಸಾ ಪೀಡಿತ ಮಣಿಪುರದಲ್ಲಿ ನಡೆದಿದೆ.

Join Our Whatsapp Group

ಮೇ 4 ರಂದು, ಎರಡು ತಿಂಗಳ ಹಿಂದೆ ನಡೆದ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.

ವಿಡಿಯೋದಲ್ಲಿ ಮಹಿಳೆಯು ಸಹಾಯಕ್ಕಾಗಿ ಅಂಗಲಾಚುತ್ತಿದ್ದರು ಯುವಕನೊಬ್ಬ ಆಕೆಯ ಮೇಲೆ ನಿರಂತರ ಹಿಂಸೆ ಮಾಡುತ್ತಿರುವುದನ್ನು ಕಾಣಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಐಟಿಎಲ್‌ ಎಫ್ ಮನವಿ ಮಾಡಿದೆ.

ಆರೋಪಿ ಬಂಧನ

ಸದರಿ ಪ್ರಕರಣ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಹೆರದಾಸ್​(32) ಬಂಧಿತ ಆರೋಪಿ.

ಹಸಿರು ಟಿ-ಶರ್ಟ್​ ಧರಿಸಿದ್ದ ಹೆರದಾಸ್ ಎನ್ನುವ ಆರೋಪಿಯನ್ನು ವಿಡಿಯೋನಲ್ಲಿ ಗುರುತಿಸಿ ತೌಬಲ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಮಹಿಳೆಯರ ಬೆತ್ತಲೆ‌ ಮೆರವಣಿಗೆ ಮಾಡಿ ವಿಕೃತಿ‌ ಮೆರೆದ ವಿಡಿಯೋವನ್ನು ಹಂಚಿಕೊಳ್ಳದಂತೆ‌ ಟ್ವಿಟರ್​ ಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಟ್ವೀಟರ್ ಸೇರಿ ವಿವಿಧ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚಿಸಿದೆ.

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ ಮೆರವಣಿಗೆ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಸಿಜೆ, ಈ ಸಂಬಂಧ ವರದಿ ನೀಡುವಂತೆ ಕೇಂದ್ರ, ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಸೂಚನೆ ಕೊಟ್ಟಿದ್ದಾರೆ.

ಸೂಕ್ತ ಕ್ರಮ ಕೈಗೊಳ್ಳುವಂತೆ ಅಮಿತ್ ಶಾ ಸೂಚನೆ

ಇನ್ನು ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಮಿತ್ ಶಾ , ಮಣಿಪುರ ಸಿಎಂ ಬಿರೇನ್ ಸಿಂಗ್​​ಗೆ ಶಾ ದೂರವಾಣಿ ಕರೆ ಪ್ರಕರಣ ಮಾಹಿತಿ ಪಡೆದುಕೊಂಡಿದ್ದು, ತಪ್ಪಿತಸ್ಥರ‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಠಣಿ ಕ್ರಮ ಕೈಗೊಳ್ಳುತ್ತೇವೆ ಎಂದ ಪ್ರಧಾನಿ ನರೇಂದ್ರ ಮೋದಿ

ಇದು ಇಡೀ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಈ ಘಟನೆಯಿಂದ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆಯಾಗಿದ್ದು, ಈ ಘಟನೆ ತುಂಬಾ ನೋವುಂಟು ಮಾಡಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮವಾಗುತ್ತೆ, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನನ್ನ ಹೃದಯ ನೋವು ಮತ್ತು ಕೋಪದಿಂದ ತುಂಬಿದೆ. ಮಣಿಪುರದ ಘಟನೆ ಯಾವುದೇ ಸುಸಂಸ್ಕೃತ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ. ಎಲ್ಲಾ ಸಿಎಂಗಳು ತಮ್ಮ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಬೇಕು. ವಿಶೇಷವಾಗಿ ಮಹಿಳೆಯರ ಸುರಕ್ಷತೆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಜಸ್ಥಾನ, ಮಣಿಪುರ ಅಥವಾ ಛತ್ತೀಸ್‌ಗಢ ದೇಶದ ಯಾವುದೇ ಮೂಲೆಯಲ್ಲಿ ಇರಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.