ಮನೆ ಸ್ಥಳೀಯ ಪದವಿ ಪರೀಕ್ಷೆ ಮುಂದೂಡಿಕೆಗೆ ಆಗ್ರಹ: ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪದವಿ ಪರೀಕ್ಷೆ ಮುಂದೂಡಿಕೆಗೆ ಆಗ್ರಹ: ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

0

ಮೈಸೂರು:  ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿಯಲ್ಲಿ ಮೈಸೂರಿನ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು  ಎಐಡಿಎಸ್ ಒ ಸಂಘಟನೆಯ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Join Our Whatsapp Group

ಪದವಿ ಕಾಲೇಜುಗಳಲ್ಲಿ ಕೇವಲ 2 ತಿಂಗಳು ಮಾತ್ರ ತರಗತಿಗಳು ನಡೆದಿವೆ. ವಿಧಾನಸಭೆ ಚುನಾವಣೆಗಾಗಿ ಕಾಲೇಜಿನ ಕಟ್ಟಡಗಳನ್ನು ಬಳಸಿಕೊಳ್ಳಲಾಗಿತ್ತು. ಹೀಗಾಗಿ ಪಾಠಗಳು ಸಮರ್ಪಕವಾಗಿ ನಡೆದಿಲ್ಲ. ಇದುವರೆಗೆ ಪಠ್ಯಕ್ರಮವೂ ಲಭ್ಯವಾಗಿಲ್ಲ. ಭಾನುವಾರ ಕೂಡ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಕೇವಲ ಒಂದು ವಾರದಲ್ಲಿ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪದವಿ ಪರೀಕ್ಷೆಯನ್ನು 15 ದಿನಗಳ ಮಟ್ಟಿಗಾದರೂ ಮುಂದೂಡಬೇಕು.  ಪರೀಕ್ಷೆ ಮುಂದೂಡಿಕೆ ಬಗ್ಗೆ ಇಂದೇ ಸುತ್ತೋಲೆ ಹೊರಡಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.