ಬೆಂಗಳೂರು: 10 ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಬಳಿಕ ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಬಿಜೆಪಿ ನಾಯಕರು ಸ್ಪೀಕರ್ ಮತ್ತು ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದರು.
ಬಿಜೆಪಿ ಶಾಸಕರ ಅಮಾನತು ಖಂಡಿಸಿ ಜೆಡಿಎಸ್, ಬಿಜೆಪಿ ಹೋರಾಟಕ್ಕೆ ಬೆಂಬಲ ನೀಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡುವ ವೇಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದರು.














