ಬೆಂಗಳೂರು: ಹೊಸಬರ ತಂಡ ನಿರ್ಮಾಣ ಮಾಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟಿ ರಮ್ಯಾಗೆ ಇದೀಗ ಹಿನ್ನಡೆಯಾಗಿದೆ. ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ರಮ್ಯಾ ಪರ ಅರ್ಜಿ ವಜಾ ಮಾಡಿದೆ.
ಸಿನಿಮಾವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್ ಪ್ರಸ್ತುತಪಡಿಸುತ್ತಿದೆ. ವಿಭಿನ್ನ ರೀತಿಯಲ್ಲಿ ಸಿನಿಮಾವನ್ನು ಪ್ರಮೋಟ್ ಮಾಡಿ, ಟೀಸರ್, ಟ್ರೇಲರ್ ನಿಂದ ಗಮನ ಸೆಳೆದ ಸಿನಿಮಾ ತಂಡಕ್ಕೆ ರಮ್ಯಾ ಕೋರ್ಟ್ ವಿಚಾರ ಹಿನ್ನೆಡೆಯಾಗಿತ್ತು.
ಆದರೆ ಇದೀಗ ಕೋರ್ಟ್ ರಮ್ಯಾ ಅರ್ಜಿಯನ್ನು ವಜಾ ಮಾಡಿದ್ದು, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತಂಡಕ್ಕೆ ಗೆಲುವಾಗಿದೆ. ಹೀಗಾಗಿ ಚಿತ್ರವು ನಿಗದಿಯಂತೆ ಜುಲೈ 21ರಂದು ಬಿಡುಗಡೆಯಾಗಲಿದೆ.
ಮೋಹಕ ತಾರೆ ರಮ್ಯಾ ಬಹು ಸಮಯದ ಬಳಿಕ ಶೂಟಿಂಗ್ ಗೆ ಈ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೂಲಕ ಭಾಗಿಯಾಗಿದ್ದರು. ಈ ಚಿತ್ರದ ಪ್ರೋಮೋದಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ರಿಲೀಸ್ ಆದ ಸಿನಿಮಾದ ಟ್ರೇಲರ್ ನಟಿ ರಮ್ಯಾ ಅವರನ್ನು ತೋರಿಸಲಾಗಿದೆ. ಇದೇ ಕಾರಣಕ್ಕೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರೋಮೋ ಶೂಟ್ ನಲ್ಲಿ ಮಾತ್ರ ನನ್ನ ದೃಶ್ಯ ಬಳಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಟ್ರೇಲರ್ ನಲ್ಲಿ ನನ್ನ ದೃಶ್ಯವನ್ನು ಅನುಮತಿಯಿಲ್ಲದೆ ಬಳಸಲಾಗಿದೆ. ಸಿನಿಮಾದಲ್ಲಿ ನನ್ನ ದೃಶ್ಯವನ್ನು ಬಳಸಬಾರದು. ಯೂಟ್ಯೂಬ್ ಸೇರಿದಂತೆ ಇತರ ಮಾಧ್ಯಮಗಳಲ್ಲಿ ಈಗಾಗಲೇ ಪ್ರಸಾರವಾಗಿರುವ ವಿಡಿಯೋವನ್ನು ತೆಗೆದುಹಾಕಬೇಕು. ನನಗೆ ಇದರಿಂದ ನಷ್ಟವಾಗಿದೆ. ಇದರಿಂದ 1 ಕೋಟಿ ರೂ. ಪರಿಹಾರವನ್ನು ನೀಡುವಂತೆ ನೋಟಿಸ್ ನಲ್ಲಿ ಒತ್ತಾಯಿಸಿದ್ದು, ತನ್ನ ದೃಶ್ಯವನ್ನು ಸಿನಿಮಾದಲ್ಲಿ ಬಳಸಬಾರದು ಎಂದು ರಮ್ಯಾ ಹೇಳಿದ್ದರು.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.