ಮನೆ ಅಪರಾಧ ಮಂಡ್ಯ: ಟ್ರಾಕ್ಟರ್-ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು

ಮಂಡ್ಯ: ಟ್ರಾಕ್ಟರ್-ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು

0

ಮಂಡ್ಯ: ಟ್ರಾಕ್ಟರ್-ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮಾದರಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

Join Our Whatsapp Group

ದಿಲೀಪ್ ಕುಮಾರ್ (22), ಶ್ರೀನಿವಾಸ್ (21) ಮೃತ ದುರ್ದೈವಿಗಳು.

ಮೃತರನ್ನು ಮಂಡ್ಯದ ಉಮ್ಮಡಹಳ್ಳಿಯ ಎಸ್.ಡಿ.ಜಯರಾಮ್ ಬಡಾವಣೆಯ  ನಿವಾಸಿಗಳೆಂದು ಗುರುತಿಸಲಾಗಿದೆ.

ಕೆಲಸಕ್ಕೆ ತೆರಳಿದ್ದ ಇಬ್ಬರು ಯುವಕರು ಕೆ.ಎಂ.ದೊಡ್ಡಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ವೇಳೆ ಮಾದರಹಳ್ಳಿ ಗ್ರಾಮದ ಬಳಿ ಎದುರಿನಿಂದ ಬರುತ್ತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಶವಗಳನ್ನು ಮಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.