ಮಂಡ್ಯ: ಮಳವಳ್ಳಿ ತಾಲೂಕಿನ ಜೆಸಿಪುರ ಹಾಗೂ ಮದ್ದೂರಿನ ಯಲದಹಳ್ಳಿ ಗ್ರಾಮಗಳ ಜಮೀನಿಗೆ ಬೆಳ್ಳಂಬೆಳಿಗ್ಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿದ್ದು, ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ.
ಸುಮಾರು 9 ಆನೆಗಳ ಗುಂಪು ಪ್ರತ್ಯಕ್ಷ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದು, ರೈತರು ಆತಂಕಗೊಂಡಿದ್ದಾರೆ.
ಮೊನ್ನೆಯಷ್ಟೆ ಮದ್ದೂರಿನ ಅಜ್ಜಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಆನೆಗಳು ಇದೀಗ ಯಲದಹಳ್ಳಿ ಗ್ರಾಮದ ಮರುಮಾದಯ್ಯ ಜಮೀನನಲ್ಲಿ ಬೆಳೆದು ನಿಂತಿದ್ದ ಎರಡು ಎಕರೆ ಕಬ್ಬು ಬೆಳೆಯನ್ನು ತುಳಿದು ನಾಶ ಮಾಡಿವೆ. ಬೆಳೆದು ನಿಂತಿದ್ದ ಕಬ್ಬನ್ನು ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ.
ಆನೆಗಳನ್ನು ನೋಡಲು ಜನರು ಮುಗಿಬಿದ್ದಿದ್ದು, ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಿಗೆ ಆನೆಗಳ ಓಡಿಸುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.