ದೇಶೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳು ಬಹುನಿರೀಕ್ಷಿತ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಎಸ್‌ಯುವಿಯನ್ನು ಬಿಡುಗಡೆ ಮಾಡಲಾಯಿತು. ಇದೊಂದು ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಯುವ ಜನರ ಹಾಟ್ ಫೆವರೇಟ್ ಆಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಸದ್ಯ, ಇದರ ಕಾಯುವಿಕೆ ಅವಧಿ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾರುತಿ ಸುಜುಕಿ ಜನವರಿಯಲ್ಲಿ ನಡೆದ ದೆಹಲಿ ಆಟೋ ಎಕ್ಸ್‌ಪೋದಲ್ಲಿ 5 ಡೋರ್ ಜಿಮ್ನಿಯನ್ನು ಪ್ರದರ್ಶಿಸಿ, ಬುಕ್ಕಿಂಗ್ ಕೂಡ ಆರಂಭಿಸಿತ್ತು. ಆಗಿನಿಂದಲೇ ಸಖತ್ ಕ್ರೇಜ್ ಹುಟ್ಟುಹಾಕಿದ್ದ ಈ ಎಸ್‌ಯುವಿಗೆ ಭಾರೀ ಪ್ರಮಾಣದಲ್ಲಿ ಗ್ರಾಹಕರು, ಮುಂಗಡವಾಗಿ ಕಾಯ್ದಿರಿಸಿದ್ದರು.
ಅಂತಿಮವಾಗಿ ಜೂನ್ 7ರಂದು ಕಂಪನಿಯು ಜಿಮ್ನಿಯನ್ನು ರೂ.12.74 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯಲ್ಲಿ ಲಾಂಚ್ ಮಾಡಿತು. ಭರ್ಜರಿ ಮೈಲೇಜ್, ಆಕರ್ಷಕ ಬೆಲೆಯ ಮಾರುತಿ ಕಾರಿಗೆ ಭಾರೀ ಡಿಮ್ಯಾಂಡ್, ಈ ಕಾರಿಗೆ ಮತ್ತಷ್ಟು ಕಾಯಬೇಕು ಪ್ರಸ್ತುತ ದೊರೆತ್ತಿರುವ ವಿವರಗಳ ಪ್ರಕಾರ, ಮಾರುತಿ ಸುಜುಕಿ ಜಿಮ್ನಿ 5 ಡೋರ್ ಎಸ್‌ಯುವಿಯನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆಗೆ 24 ರಿಂದ 26 ವಾರಗಳವರೆಗೆ ಕಾಯಬೇಕು. ಇದು, ರಾಷ್ಟ್ರ ರಾಜಧಾನಿ ದೆಹಲಿಗೆ ಮಾತ್ರ ಅನ್ವಯಿಸುತ್ತದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ಕಲರ್, ವೇರಿಯೆಂಟ್ ಆಧರಿಸಿ, ಕಾಯುವಿಕೆ ಅವಧಿ ಬೇರೆ-ಬೇರೆಯಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್‌ಶಿಪ್ ಸಂಪರ್ಕಿಸಿರಿ 5,99,900 ಮಾರುತಿ ಸುಜುಕಿ ಜಿಮ್ನಿ 5 ಡೋರ್ ಎಸ್‌ಯುವಿ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು, 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 104.8 Ps ಪವರ್ ಹಾಗೂ 134.2 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5 ಸ್ವೀಡ್ ಮ್ಯಾನುವಲ್/ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ. ಮೈಲೇಜ್ ವಿಷಯಕ್ಕೆ ಬರುವುದಾದರೆ, ಮಾರುತಿ ಸುಜುಕಿ ಜಿಮ್ನಿ 5 ಡೋರ್ ಎಸ್‌ಯುವಿ, ರೂಪಾಂತರಗಳಿಗೆ ಅನುಗುಣವಾಗಿ 16.39km/l ರಿಂದ 16.94 km/l ಮೈಲೇಜ್ ನೀಡುತ್ತದೆ. ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ಹೊಂದಿರುವ ಜಿಮ್ನಿ, ವಿನ್ಯಾಸದ ದೃಷ್ಟಿಯಿಂದಲೂ ಆಕರ್ಷಕವಾಗಿದ್ದು, ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ಸ್, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಒಳಗೊಂಡಿದೆ. Maruti Wagon R ಖರೀದಿಸುವ ಮುನ್ನ ಇದು ತಿಳಿದಿರಲಿ.
ಸದ್ದಿಲ್ಲದೆ ಪ್ರಮುಖ ಫೀಚರ್ ತೆಗೆದ ಕಂಪನಿ! ಮಾರುತಿ ಸುಜುಕಿ ಜಿಮ್ನಿ 5 ಡೋರ್ ಒಳಭಾಗದಲ್ಲಿ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಮುಖ್ಯವಾಗಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹೊಂದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್ಸ್, ABS ಹಾಗೂ EBD ಪಡೆದಿದೆ. ಜೊತೆಗೆ 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. ನೆಕ್ಸಾ ಡೀಲರ್ ಶಿಪ್ ಮೂಲಕ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಜಿಮ್ನಿಗೆ ಮಹೀಂದ್ರಾ ಥಾರ್ ಮತ್ತು ಫೋರ್ಸ್ ಗೂರ್ಖಾ ಎಸ್‌ಯುವಿಗಳು ಪ್ರತಿಸ್ಪರ್ಧಿಯಾಗಿವೆ. ಸದ್ಯ, ಜಿಮ್ನಿ 24 ರಿಂದ 26 ವಾರಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೇ, ವಿತರಣೆಗೆ ಹಿಡಿಯುವ ಈ ಸಮಯ ಮತ್ತಷ್ಟು ಹೆಚ್ಚಾಗಬಹುದು. ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.