ಮನೆ ಅಪರಾಧ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು

0

ಮಂಡ್ಯ: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.

Join Our Whatsapp Group

ಮಂಡ್ಯ ಜಿಲ್ಲೆಯ  ಕೆ.ಆರ್.ಪೇಟೆ ಪಟ್ಟಣದ  ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಸಾರ್ಜನಿಕರು ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ಒಪ್ಪಿಸಿದರು.

ಕೆ.ಆರ್.ಪೇಟೆ ಟೌ‌ನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.