ಮನೆ ಅಪರಾಧ ಮನೆಯಲ್ಲಿ ದಾಸ್ತಾನು ಮಾಡಿದ್ದ 40 ಕೆ.ಜಿ. ಗಾಂಜಾ ವಶ: ಇಬ್ಬರ ಬಂಧನ

ಮನೆಯಲ್ಲಿ ದಾಸ್ತಾನು ಮಾಡಿದ್ದ 40 ಕೆ.ಜಿ. ಗಾಂಜಾ ವಶ: ಇಬ್ಬರ ಬಂಧನ

0

ಮೈಸೂರು : ಮನೆಯೊಂದರಲ್ಲಿ ದಾಸ್ತಾನು ಮಾಡಿದ್ದ 40 ಕೆ.ಜಿ.  ಗಾಂಜಾವನ್ನು ಮೈಸೂರಿನಲ್ಲಿ ಸಿಸಿಬಿ ಪೊಲೀಸರು  ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.

Join Our Whatsapp Group

ಉದಯಗಿರಿ ಪೊಲೀಸ್ ಠಾಣಾ  ವ್ಯಾಪ್ತಿಯ ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿದ್ದರ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರಿ ಕಾರ್ಯಚರಣೆ ನಡೆಸಿದ್ದರು. ಈ ವೇಳೆ 40 ಕೆಜಿಯಷ್ಟು ಗಾಂಜಾ ಪತ್ತೆಯಾಗಿದ್ದು, ದಾಸ್ತನು ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಜಾಹ್ನವಿ ಅವರ ಮಾರ್ಗದರ್ಶನ,  ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ ಪೆಕ್ಟರ್ ಶೇಖರ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.