ಬೆಂಗಳೂರು: ವಿದ್ಯುತ್ ದರ ಸೇರಿ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾಗಿದ್ದು, ಹೋಟೆಲ್ ಗಳ ತಿಂಡಿ–ತಿನಿಸುಗಳ ಬೆಲೆಯಲ್ಲಿ ಶೇ 10ರಷ್ಟು ಹೆಚ್ಚಿಸುವುದು ಅನಿವಾರ್ಯವಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘ ತಿಳಿಸಿದೆ.
ಈಗಾಗಲೇ ಅಕ್ಕಿ, ತರಕಾರಿ ಸೇರಿ ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಒಂದು ಕೆ.ಜಿ. ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳವಾಗಿದೆ. ಆಗಸ್ಟ್ 1ರಿಂದ ಹಾಲಿನ ದರವು ಹೆಚ್ಚಾಗಿದೆ. ಇದರಿಂದ, ಕಾಫಿ ಮತ್ತು ಚಹಾ ಬೆಲೆ ₹2 ರಿಂದ ₹3 ಹೆಚ್ಚಳವಾಗಲಿದೆ. ತಿಂಡಿ–ತಿನಿಸುಗಳ ದರದಲ್ಲಿ ₹5 ಹಾಗೂ ಊಟಕ್ಕೆ ₹10 ಹೆಚ್ಚಳವಾಗಲಿದೆ.
ಈ ಬಗ್ಗೆ ಮಂಗಳವಾರ ನಡೆಯಲಿರುವ ಸಂಘದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘದ ಗೌರವ ಕಾರ್ಯದರ್ಶಿ ವಿರೇಂದ್ರ ಕಾಮತ್ ಮಾಹಿತಿ ನೀಡಿದರು.
ಈಗಾಗಲೇ ಕೆಲ ಹೋಟೆಲ್ ಗಳಲ್ಲಿ ದರಗಳನ್ನು ಹೆಚ್ಚಿಸಲಾಗಿದೆ. ಅಧಿಕೃತವಾಗಿ ಆಗಸ್ಟ್ 1ರಂದು ಎಲ್ಲ ತಿಂಡಿ–ತಿನಿಸುಗಳ ದರಗಳಲ್ಲಿ ಹೆಚ್ಚಳವಾಗಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.